ಬೆಂಗಳೂರು:ಸಚಿವ ಸ್ಥಾನ ವಂಚಿತರ ಮನವೊಲಿಕೆ ಭಾಗವಾಗಿ ಶಂಕರಗೌಡ ಬಿ. ಪಾಟೀಲ್ರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಶಂಕರಗೌಡ ಪಾಟೀಲ್ ನೇಮಕ - Shankargowda Patil
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಶಂಕರಗೌಡ ಬಿ. ಪಾಟೀಲ್ರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಎಸ್.ಆರ್.ವಿಶ್ವನಾಥ್, ಎಂ.ಪಿ ರೇಣುಕಾಚಾರ್ಯ ನಂತರ ಶಂಕರಗೌಡ ಬಿ. ಪಾಟೀಲ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ಒಲಿದಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಇದರ ಜೊತೆಯಲ್ಲಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ಬಿ.ಜೆ. ಪುಟ್ಟಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶಿಸಲಾಗಿದೆ. ಸಿಎಂ ಆಪ್ತ ಬಳಗದಲ್ಲಿರುವ ಪುಟ್ಟಸ್ವಾಮಿ ಹಿಂದೆ ಬಿಎಸ್ವೈ ಸಿಎಂ ಆಗಿದ್ದ ವೇಳೆ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದರು.