ಬೆಂಗಳೂರು:ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಜನ್ಯಯುತ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿಎಂ ಬೊಮ್ಮಾಯಿ ಭೇಟಿಯಾದ ಮಾಜಿ ಕೇಂದ್ರ ಸಚಿವ ಶರದ್ ಪವಾರ್ - ಕೇಂದ್ರದ ಮಾಜಿ ಸಚಿವ ಶರದ್ ಪವಾರ್
ಶರದ್ ಪವಾರ್ ಅವರು ಕುಟುಂಬ ಸದಸ್ಯರ ಮದುವೆ ಸಮಾರಂಭದ ಆಹ್ವಾನ ಪತ್ರಿಕೆ ನೀಡಲು ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಸಿಎಂ ಬೊಮ್ಮಾಯಿ ಭೇಟಿಯಾದ ಶರದ್ ಪವಾರ್
ಎರಡು ದಿನದಿಂದ ಬೆಂಗಳೂರಿನಲ್ಲಿರುವ ಪವಾರ್, ಕುಟುಂಬ ಸದಸ್ಯರ ಮದುವೆ ಸಮಾರಂಭದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲು ಆಗಮಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿಗೆ ಪವಾರ್ ಅಭಿನಂದನೆ ಸಲ್ಲಿಸಿದ್ದು, ಕೆಲಕಾಲ ರಾಜಕೀಯ ಕುರಿತು ಮಾತುಕತೆ ನಡೆಸಿದ್ದಾರೆ.
ಪವಾರ್ ಇನ್ನೂ ನಾಲ್ಕೈದು ದಿನ ಬೆಂಗಳೂರಿನಲ್ಲೇ ಇರಲಿದ್ದಾರೆ. ಈ ನಡುವೆ ಎನ್.ಸಿ.ಪಿ ನಾಯಕ ಮತ್ತು ಸಿಎಂ ಬೊಮ್ಮಾಯಿ ಭೇಟಿ ಕುತೂಹಲ ಮೂಡಿಸಿದೆ. ಈ ಭೇಟಿ ವೇಳೆ ಸಚಿವ ಆರ್.ಅಶೋಕ್ ಉಪಸ್ಥಿತರಿದ್ದರು.