ಕರ್ನಾಟಕ

karnataka

ETV Bharat / state

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ: ಶೀಘ್ರ ಗುಣಮುಖರಾಗುವಂತೆ ಬಿಜೆಪಿ ನಾಯಕರ ಹಾರೈಕೆ - Minister Shashikala Jolle

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ದೃಢಪಟ್ಟಿದ್ದು, ಶೀಘ್ರ ಗುಣಮುಖರಾಗುವಂತೆ ಸಿಎಂ ಸೇರಿದಂತೆ ಬಿಜೆಪಿ ನಾಯಕರು ಹಾರೈಸಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ

By

Published : Sep 1, 2020, 10:16 AM IST

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಳಿಕ ಅನೇಕ ಸಚಿವರಿಗೆ ಕೊರೊನಾ ಸೊಂಕು ತಗುಲಿದೆ. ಇದೀಗ ಸಚಿವೆ ಶಶಿಕಲಾ ಜೊಲ್ಲೆಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಶೀಘ್ರ ಗುಣಮುಖರಾಗುವಂತೆ ಸಿಎಂ ಸೇರಿದಂತೆ ಬಿಜೆಪಿ ನಾಯಕರು ಹಾರೈಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಶೀಘ್ರವಾಗಿ ಕೊರೊನಾದಿಂದ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಲಿ ಎಂದು ಸಿಎಂ ಹೇಳಿದ್ದಾರೆ.

ಇನ್ನು ಈ ಕುರಿತು ಟ್ವೀಟ್​ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸಂಪುಟ ಸಹೋದ್ಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಶ್ರೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಶಶಿಕಲಾ ಜೊಲ್ಲೆಯವರು ಶ್ರೀಘ್ರ ಗುಣಮುಖರಾಗಿ ಪುನಃ ಸಕ್ರಿಯವಾಗಿ ಚಟುವಟಿಕೆಗಳಲ್ಲಿ ತೊಡಗುವಂತಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾರೈಸಿದ್ದಾರೆ.

ABOUT THE AUTHOR

...view details