ಕರ್ನಾಟಕ

karnataka

ETV Bharat / state

ಬೆಂಗಳೂರು ನಗರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಜೊತೆ ಶಿವಕುಮಾರ್ ಸಭೆ: ಸರ್ಕಾರದ ವಿರುದ್ಧ ರಣತಂತ್ರ

ಬೆಂಗಳೂರು ಮಹಾನಗರದಲ್ಲಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸೋಂಕು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಹಾಗೂ ಬೃಹತ್ ಹೋರಾಟಗಳನ್ನು ರೂಪಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರು ಬೆಂಗಳೂರು ನಗರ ವ್ಯಾಪ್ತಿಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.

By

Published : Jul 29, 2020, 5:22 PM IST

Shivakumar meetings with Congress leaders from Bangalore city limits
ಬೆಂಗಳೂರು ನಗರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಜೊತೆ ಶಿವಕುಮಾರ್ ಸಭೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರದ ಹಲವು ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಹಾಲಿ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರು, ಹಾಲಿ ಮತ್ತು ಮಾಜಿ ಕಾರ್ಪೊರೇಟರ್​ಗಳು, ವಿಧಾನಸಭೆ ಹಾಗೂ ಕಾರ್ಪೊರೇಷನ್ ಚುನಾವಣೆ ಪರಾಜಿತ ಅಭ್ಯರ್ಥಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಜತೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸಮಾಲೋಚನಾ ಸಭೆ ನಡೆಸಿದರು.

ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ಶಾಸಕರಾದ ಸೌಮ್ಯ ರೆಡ್ಡಿ, ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

ಬೆಂಗಳೂರು ಮಹಾನಗರದಲ್ಲಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೇ ವಿಚಾರವನ್ನು ಮುಂದಿಟ್ಟು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಹಾಗೂ ಬೃಹತ್ ಹೋರಾಟಗಳನ್ನು ರೂಪಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಶಿವಕುಮಾರ್ ಈ ವೇಳೆ ಚರ್ಚಿಸಿದರು.

ಬೆಂಗಳೂರು ಮಹಾನಗರದಲ್ಲಿ ನೆಲೆಸಿದ್ದ ಬೇರೆ ಬೇರೆ ದೇಶದ ಹಾಗೂ ರಾಜ್ಯದ ಉದ್ಯೋಗಿಗಳು, ಕಾರ್ಮಿಕರು ಕೋವಿಡ್ ಆತಂಕದಿಂದಾಗಿ ಊರು ಬಿಟ್ಟಿದ್ದಾರೆ. ಇವರನ್ನು ಹೋಗದಂತೆ ತಡೆಯುವ ಯತ್ನವನ್ನು ಸರ್ಕಾರ ಮಾಡಿಲ್ಲ. ಉತ್ತಮ ಕೈಗಾರಿಕೆಗಳು ಬೆಂಗಳೂರಿನಿಂದ ತೆರಳುವ ಯೋಚನೆ ಮಾಡುತ್ತಿವೆ. ಸರ್ಕಾರ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಹೆಚ್ಚಿಸುವ ಕಾರ್ಯ ಮಾಡುತ್ತಿದೆ. ಜನ ಬೆಂಗಳೂರು ತೊರೆಯುತ್ತಿರುವುದರಿಂದ ಜಾಗತಿಕ ಮಟ್ಟದಲ್ಲಿ ಬೆಂಗಳೂರಿಗೆ ಇದ್ದ ಉತ್ತಮ ಹೆಸರು ಹಾಳಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಪಕ್ಷವಾಗಿರುವ ಹಾಗೂ ಪ್ರಮುಖ ಪ್ರತಿ ಪಕ್ಷವಾಗಿರುವ ಕಾಂಗ್ರೆಸ್​ನ ಜವಾಬ್ದಾರಿ ಈಗ ಹೆಚ್ಚಿದೆ. ಮಹಾನಗರದಿಂದ ತೆರಳಲು ಮುಂದಾಗಿರುವವರನ್ನು ತಡೆಯಬೇಕಿದೆ. ಜೊತೆಗೆ ಎಲ್ಲೆಡೆ ಕೈಗಾರಿಕೆಗಳು, ಸಿಬ್ಬಂದಿ ಹಾಗೂ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಅವರಿಗೆ ಪರಿಹಾರ ಕಲ್ಪಿಸುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳ ಜವಾಬ್ದಾರಿ ಹೆಚ್ಚಿದೆ ಎಂದು ಡಿಕೆಶಿ ಹೇಳಿದರು.

ಸರ್ಕಾರದ ವಿರುದ್ಧ ನಡೆಸಬಹುದಾದ ಹೋರಾಟಗಳು ಹಾಗೂ ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿದರು. ಮುಂಬರುವ ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಕೂಡ ನಾವು ಈಗ ಕೈಗೊಳ್ಳುವ ಕ್ರಮ ಸಹಕಾರಿಯಾಗಲಿದೆ. ಚುನಾವಣೆಯನ್ನು ಸಕಾರಾತ್ಮಕ ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸಿ ಎಂದು ನಾಯಕರಿಗೆ ಸಲಹೆ ನೀಡಿದ್ದಾರೆ.

ABOUT THE AUTHOR

...view details