ಕರ್ನಾಟಕ

karnataka

ETV Bharat / state

ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಪೂರ್ಣಗೊಳ್ಳುತ್ತದೆ: ಸಿಎಂ ಬಿಎಸ್​ವೈ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿ ಮಾತನಾಡಿದ ಸಿಎಂ ಬಿಎಸ್​ವೈ, ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದರು.

shivamogga
ಮುಖ್ಯಮಂತ್ರಿ ಬಿಎಸ್​ವೈ ಭರವಸೆ

By

Published : Jun 15, 2020, 5:04 PM IST

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಜನತೆಯ ಬಹು ದಿನಗಳ ಕನಸಾಗಿದ್ದ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ ಜಿಲ್ಲೆಯ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ದೊರೆಯುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ ನಿಗದಿತ ಸಮಯದ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು. ಉಡಾನ್ ಯೋಜನೆಯಿಂದಾಗಿ ಜನಸಾಮಾನ್ಯರೂ ವಿಮಾನಯಾನ ಕೈಗೊಳ್ಳಬಹುದಾದ ವಾತಾವರಣವಿದೆ ಎಂದರು.

ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನೀರಾವರಿ ಯೋಜನೆಗಳು, ಶಾಲೆಗಳಲ್ಲಿ ಮೂಲಭೂತ ಸೌಲಭ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಅನುಷ್ಠಾನಗೊಳಿಸಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಗೆ ವೇಗ ದೊರೆತಿದೆ. ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ನೂತನ ವಿಭಾಗ ಕಚೇರಿ ಆರಂಭಿಸಿರುವುದರಿಂದ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ವೇಗ ದೊರೆಯಲಿದೆ. ಸಿಗಂದೂರು ಬಳಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣ ಕಾರ್ಯ ಆರಂಭಿಸುವ ಮೂಲಕ ಜಿಲ್ಲೆಯ ಈ ಭಾಗದ ಜನರ ಬಹು ವರ್ಷಗಳ ಕನಸು ನನಸಾಗುತ್ತಿದೆ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಶಿವಮೊಗ್ಗದಲ್ಲಿ ಮುಖ್ಯ ಎಂಜಿನಿಯರ್ ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಇನ್ನಷ್ಟು ವೇಗ ದೊರೆಯಲಿದೆ. ಗುಣಮಟ್ಟದ ಕೆಲಸ ಇದರಿಂದ ಸಾಧ್ಯವಾಗಲಿದೆ ಎಂದರು.

ABOUT THE AUTHOR

...view details