ಬೆಂಗಳೂರು: ಸ್ಪೀಕರ್ ಅವರು ಶಾಸಕರ ರಾಜೀನಾಮೆ ಸ್ವೀಕರಿಸಿದ್ದರೆ ಈ ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ. ಅವರ ನಿರ್ಲಕ್ಷ್ಯದ ಪರಿಣಾಮ ವಿಧಾನಸಭೆಯಲ್ಲಿ ಗದ್ದಲ ನಡೆಯುವುದಕ್ಕೆ ಕಾರಣವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದರೆ ಗೊಂದಲಗಳು ಇರುತ್ತಿರಲಿಲ್ಲ: ಶೋಭಾ ಕರಂದ್ಲಾಜೆ - undefined
ಕುಮಾರಸ್ವಾಮಿ ಬಹುಮತ ಸಾಬೀತಿನಿಂದ ಯಾಕೆ ಓಡಿ ಹೋಗ್ತಿದ್ದಾರೆ ಎಂದು ಪ್ರಶ್ನಿಸಿರುವ ಸಂಸದೆ ಶೋಭಾ ಕರಂದ್ಲಾಜೆ ಸ್ಪೀಕರ್ ಅವರು ಬಹುಮತ ಸಾಬೀತಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ.
ದಿನ ಬೆಳಗಾದರೆ ಅಧಿಕಾರಿಗಳು ಎಲ್ಲಿರುತ್ತಾರೆ ಎಂದು ಗೊತ್ತಿರುವುದಿಲ್ಲ. ಕುಮಾರಸ್ವಾಮಿ ಬಹುಮತ ಸಾಬೀತಿನಿಂದ ಯಾಕೆ ಓಡಿ ಹೋಗ್ತಿದ್ದಾರೆ ಎಂದು ಶೋಭಾ ಪ್ರಶ್ನಿಸಿದ್ದಾರೆ. ಅಲ್ಲದೆ, ಸ್ಪೀಕರ್ ಅವರು ಬಹುಮತ ಸಾಬೀತಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಬೃಂದಾವನ ಧ್ವಂಸ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ಬೃಂದಾವನ ಧ್ವಂಸ ಮಾಡಿರುವ ಘಟನೆ ನಮ್ಮ ಸಮಾಜಕ್ಕೆ ಹಿತಕರವಾಗಿಲ್ಲ. ಇದರ ಬಗ್ಗೆ ತನಿಖೆ ನಡೆಸಲು ಸರ್ಕಾರ ಸತ್ತಿದೆ. ನವಬೃಂದಾವನ ಉತ್ತರಾದಿ ಮಠಕ್ಕೆ ಸೇರಿರುವ ಜಾಗ. ಆದರೆ ದುಷ್ಕೃತ್ಯ ನಡೆಸಿರುವ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಶೋಭಾ ಆಗ್ರಹಿಸಿದರು.