ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ: ಸ್ವಯಂಪ್ರೇರಿತ ಪಿಐಎಲ್​ ದಾಖಲಿಸಿಕೊಂಡ ಹೈಕೋರ್ಟ್ - ವೈದ್ಯಕೀಯ ಸಿಬ್ಬಂದಿ ಕೊರತೆ

HC filed voluntary PIL on shortage of medical staff: ಅ. 16ರಂದು ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತು ವರದಿ ಪ್ರಕಟವಾಗಿದ್ದು, ಅರ್ಜಿ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡುವಂತೆ ಹೈಕೋರ್ಟ್​ ಸೂಚಿಸಿದೆ.

High Court
ಹೈಕೋರ್ಟ್​

By ETV Bharat Karnataka Team

Published : Nov 7, 2023, 1:00 PM IST

ಬೆಂಗಳೂರು: ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅಕ್ಟೋಬರ್ 16ರಂದು ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಸಂಬಂಧ ವರದಿ ಪ್ರಕಟವಾಗಿದೆ ಎಂದು ಪ್ರಸ್ತಾಪಿಸಿತು. ಜತೆಗೆ, ವೈದ್ಯರು ಸೇರಿದಂತೆ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿ ಕೊರತೆಯ ಕುರಿತು ಪತ್ರಿಕೆಗಳಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಅರ್ಜಿ ದಾಖಲಿಸಿಕೊಂಡಿತು.

ಅಲ್ಲದೆ, 454 ಗ್ರಾಮೀಣ ಭಾಗದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಇದರಿಂದ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ಲಭ್ಯವಾಗಬೇಕಿದೆ‌. ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7492 ಶುಶ್ರೂಷಕಿಯರು, 1517 ಲ್ಯಾಬ್ ಟೆಕ್ನಿಷಯನ್ಸ್, 1517 ಫಾರ್ಮಸಿ ಸಿಬ್ಬಂದಿ, 1752 ಸಹಾಯಕರು 3253 ಗ್ರೂಪ್ ಡಿ ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ಪ್ರಕಟವಾಗಿದೆ. ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಅರ್ಜಿ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸೂಚನೆ ನೀಡಿದೆ.

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ವಕೀಲ ಶ್ರೀಧರ್ ಪ್ರಭು ಅವರನ್ನು ಅಮೈಕಾಸ್ ಕ್ಯೂರಿಯನ್ನಾಗಿ ನೇಮಕ ಮಾಡಿದೆ. ಜತೆಗೆ ಅವರ ಸಹಾಯಕರನ್ನಾಗಿ ವಕೀಲ ವಚನ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:ನಿರ್ದೇಶಕ ಸ್ಥಾನದಿಂದ ಪ್ರೊಪೆಸರ್​ ಹುದ್ದೆಗೆ ಮುಂದುವರಿಕೆ: ಈ ಬಗ್ಗೆ ಸಲ್ಲಿಕೆಯಾದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ABOUT THE AUTHOR

...view details