ಬೆಂಗಳೂರು :ಜೂನ್ ಮೊದಲ ವಾರದಿಂದ ನೈರುತ್ಯ ಮುಂಗಾರು ಆರಂಭವಾಗಿದ್ದರೂ ಕೂಡ ರಾಜ್ಯದಲ್ಲಿ ಮಳೆ ಕೊರತೆ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಒಳನಾಡಿನಲ್ಲಿ ಮಾತ್ರ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಮುಂದಿನ ಮೂರ್ನಾಲ್ಕು ದಿನ ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ವರ್ಷಧಾರೆಯ ಲಕ್ಷಣಗಳು ಗೋಚರಿಸಲಿವೆ.