ಬೆಂಗಳೂರು: ಜೂ. 16ರಂದು ಲಡಾಕ್ನ ಗಾಲ್ವಾನ್ ವ್ಯಾಲಿಯಲ್ಲಿ ನಡೆದ ಚೀನಾ ವಿರುದ್ಧ ಹೋರಾಟದಲ್ಲಿ ವೀರ ಮರಣವನ್ನಪ್ಪಿದ ಯೋಧರಿಗೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಹುತಾತ್ಮ ಯೋಧರಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆ...! - ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸುದ್ದಿ
ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ವೈ. ವಿಜಯೇಂದ್ರ, ಶ್ರೀ ತಿಪ್ಪೇಸ್ವಾಮಿ, ಡಾ. ಅರುಣ್ ಸೋಮಣ್ಣ ಮೊದಲಾದವರು ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಒಂದು ನಿಮಿಷದ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವರ್ಚುವಲ್ ರ‍್ಯಾಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಎರಡನೇ ಅವಧಿಯ ಒಂದು ವರ್ಷ ಪೂರ್ಣಗೊಳಿಸಿದ್ದು ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ತುಮಕೂರು ಜಿಲ್ಲೆಯಲ್ಲಿ ಯುವ ಮೋರ್ಚಾ ವರ್ಚುವಲ್ ರ್‍ಯಾಲಿ ನಡೆಯಿತು. ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ರ‍್ಯಾಲಿ ಆರಂಭಕ್ಕೂ ಮುನ್ನ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಚೀನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.