ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ಹನಿಟ್ರ್ಯಾಪ್ ಗಾಗಿ 500 ಕೋಟಿ ರೂ. ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಶ್ರೀಧರ್ ಮೂರ್ತಿ ಎಂಬುವರು ಜಾರಿ ನಿರ್ದೇಶಾಲಯಕ್ಕೆ (ಇಡಿ) ದೂರು ನೀಡಿದ್ದಾರೆ.
ಡಿಕೆಶಿ ಜೊತೆಗೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಶಂಕಿತ ಆರೋಪಿ ನರೇಶ್ ಗೌಡ ಸೇರಿ ಐವರ ವಿರುದ್ಧ ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವರು ದೂರು ನೀಡಿದ್ದು, ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡು ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.