ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕುಗ್ಗಿದ್ದು, ಸೆಪ್ಟೆಂಬರ್ 15ರವರೆಗೆ ಕರಾವಳಿ ಹೊರತು ಪಡಿಸಿ, ಬೇರೆ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕಳೆದ ವಾರದಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಬಿಡುವಿಲ್ಲದೇ ಮಳೆಯಾಗಿದ್ದು, ಮುಂದಿನ ನಾಲ್ಕು ದಿನ ಮಳೆ ಬೀಳುವ ಸಾಧ್ಯತೆ ಇಲ್ಲ ಎಂದಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸೋಮವಾರದಿಂದ ಬುಧವಾರದ ವರೆಗೆ ಮಳೆಯಾಗಲಿದ್ದು, ಆರೆಂಜ್ ಅಲಟ್೯ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿದ್ದು, ಈ ಸಮಯದಲ್ಲಿ ಮಳೆ ಬೀಳುವ ಸಾಧ್ಯತೆ ಕಡಿಮೆ ಇರುವುದು ವರವಾಗಿದೆ.ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲಟ್೯:ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾನುವಾರದಿಂದ ಬುಧವಾರದವರೆಗೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.