ಬೆಂಗಳೂರು:ನಟಿಯರಾದ ಶೃತಿ ಹಾಗೂ ತಾರಾ ಅನುರಾಧ ಅವರಿಗೆ ರಾಜ್ಯ ಸರ್ಕಾರದಿಂದ ಹೊಸವರ್ಷದ ಭರ್ಜರಿ ಕೊಡುಗೆ ಲಭಿಸಿದ್ದು, ಇಬ್ಬರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿ ಆದೇಶ ಹೊರಡಿಸಲಾಗಿದೆ.
ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಶೃತಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಾರಾ ಅಧ್ಯಕ್ಷೆ! ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯನ್ನಾಗಿ ಶೃತಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯನ್ನಾಗಿ ತಾರಾ ಅನುರಾಧ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಜನವರಿ 1 ರಂದೇ ನೇಮಕದ ಆದೇಶ ಪ್ರತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹಿ ಹಾಕಿದ್ದು, ಇದೀಗ ಆದೇಶದ ಪ್ರತಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಿದೆ.
ರಾಜ್ಯ ಬಿಜೆಪಿ ಘಟಕದಲ್ಲಿ ಸಕ್ರೀಯರಾಗಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಉಭಯ ನಾಯಕಿಯರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.