ಬೆಂಗಳೂರು:ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಬೆಂಗಳೂರಿನ ಹೆಚ್ಎಎಲ್ ರಸ್ತೆಯ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇಂದು ಏಕಾಏಕಿ ದಲಿತ ಕವಿ ಇನ್ನಿಲ್ಲ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು, ಈ ಬಗ್ಗೆ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕೂಡ ಟ್ವೀಟ್ ಮಾಡಿದ್ದರು. ಆದರೆ ಇದೀಗ ಸಿದ್ದಲಿಂಗಯ್ಯನವರ ಸಹೋದರ ಶಿವಶಂಕರ್ ಸ್ಪಷ್ಟೀಕರಣ ನೀಡಿದ್ದು, ಸಿದ್ದಲಿಂಗಯ್ಯ ಆರೋಗ್ಯವಾಗಿದ್ದಾರೆ ಎಂದಿದ್ದಾರೆ.
ದಲಿತ ಕವಿ ಸಿದ್ದಲಿಂಗಯ್ಯ ಆರೋಗ್ಯದ ಕುರಿತಂತೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡಿದ್ದಾರೆ. ಕೋವಿಡ್ ಪಾಸಿಟಿವ್ ಬಂದಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅರೋಗ್ಯ ಕೂಡ ಸುಧಾರಣೆಯಾಗುತ್ತಿದೆ ಎಂದಿದ್ದಾರೆ.