ಕರ್ನಾಟಕ

karnataka

ETV Bharat / state

'ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡ್ಕೊಂಡೆವು, ಕುಕ್ಕದೆ ಬಿಡುತ್ತಾ?' - kumaraswami blam

ಮಾಜಿ ಸಿಎಂ ಕುಮಾರಸ್ವಾಮಿ ಅವರ ಮುದ್ದಿನ ಗಿಣಿ ಹದ್ದಾಗಿ ಕುಕ್ಕಿದ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ

By

Published : Sep 24, 2019, 10:39 AM IST

ಬೆಂಗಳೂರು:ನಂಬಿಕಸ್ಥರಿಂದಲೇ ನನಗೆ ಮೋಸವಾಗಿದೆ ಎಂಬುದನ್ನು ಕಡೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಜೊತೆಗೆ ಹೆಚ್‌.ಡಿ ಕುಮಾರಸ್ವಾಮಿಯವರಿಗೆ ತಿರುಗೇಟು ಕೊಟ್ಟಿದ್ದಾರೆ.

ನಿನ್ನೆ ಶಾಸಕ ಹೆಚ್‌ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯನವರು ಸಾಕಿದ ಗಿಣಿಗಳೇ ಅವರನ್ನು ಹದ್ದಾಗಿ ಕುಕ್ಕಿದ್ದವು ಎಂದು ಟೀಕಿಸಿದ್ದರು. ಇದಕ್ಕೆ ಇಂದು ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದು, ಕುಮಾರಸ್ವಾಮಿಯವರನ್ನು ಉಲ್ಲೇಖಿಸಿ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ? ಎಂದು ಟಾಂಗ್​ ಕೊಟ್ಟಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ, ತುಮಕೂರಿನಲ್ಲಿ ಜೆಡಿಎಸ್​ ಸೋಲಿಗೆ ಹಾಗೂ ಕೋಲಾರದಲ್ಲಿ ಕಾಂಗ್ರೆಸ್​ ಸೋಲಿಗೆ ಸಿದ್ದರಾಮಯ್ಯ ಸಾಕಿದ ಗಿಣಿಗಳೇ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.

ABOUT THE AUTHOR

...view details