ಬೆಂಗಳೂರು : ಪ್ರವಾಹದಿಂದ ತತ್ತರಿಸಿದ ಹೋದ ಕರ್ನಾಟಕಕ್ಕೆ ಪರಿಹಾರ ಕೊಡುವ ವಿಚಾರವಾಗಿ ಪ್ರಧಾನಿ ಮೋದಿ ನಡೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವ ಪ್ರಧಾನಿಯೂ ರಾಜ್ಯವನ್ನು ನಿರ್ಲಕ್ಷಿಸಿಲ್ಲ : ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ - Farmer cm Siddaramaia'
ಯಾವ ಕೇಂದ್ರ ಸರ್ಕಾರವಾಗಲಿ, ಪ್ರಧಾನಿಯಾಗಲಿ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
![ಯಾವ ಪ್ರಧಾನಿಯೂ ರಾಜ್ಯವನ್ನು ನಿರ್ಲಕ್ಷಿಸಿಲ್ಲ : ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ](https://etvbharatimages.akamaized.net/etvbharat/prod-images/768-512-4158338-thumbnail-3x2-sid.jpg)
: ಸಿದ್ದರಾಮಯ್ಯ
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ ವಾಜಪೇಯಿ ಸರ್ಕಾರ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವಾಗಲಿ, ಪ್ರಧಾನಿಯಾಗಲಿ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ನರೇಂದ್ರ ಮೋದಿ ಅವರಿಗೆ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.