ಬೆಂಗಳೂರು :ಅಧಿಕ ರಕ್ತದೊತ್ತಡದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಧಿಕ ರಕ್ತದೊತ್ತಡ: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು - siddaramaiah admitted to hospital news
ಅಧಿಕ ರಕ್ತದೊತ್ತಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಆರೋಗ್ಯವಾಗಿದ್ದು, ಮನೆಗೆ ವಾಪಸ್ ಆಗಿದ್ದಾರೆ ಎಂದು ಗೊತ್ತಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಚುನಾವಣೆಯಲ್ಲಿ ನಿರಂತರ ಪ್ರವಾಸ ಹಾಗೂ ಚುನಾವಣೆ ಫಲಿತಾಂಶದಿಂದ ಬಳಲಿದ್ದ ಸಿದ್ದರಾಮಯ್ಯ ಅವರಿಗೆ ಇಂದು ಬೆಳಗ್ಗೆ ದಿಢೀರ್ ಆಗಿ ರಕ್ತದೊತ್ತಡ ಹೆಚ್ಚಾಗಿತ್ತು. ಹೀಗಾಗಿ ಕುಟುಂಬಸ್ಥರು ಅವರನ್ನ ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.