ಕರ್ನಾಟಕ

karnataka

ETV Bharat / state

ವಜುಬಾಯಿ ವಾಲಾ ಭೇಟಿಯಾಗಲಿರುವ ಸಿಎಂ ಬಿಎಸ್‌ವೈ, ಸಿದ್ದರಾಮಯ್ಯ - ವಜುಭಾಯಿ ವಾಲಾ ಭೇಟಿ ಮಾಡಿದ ಸಿದ್ದರಾಮಯ್ಯ

ಸುದೀರ್ಘ ಅವಧಿಗೆ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ ವಜುಬಾಯಿ ವಾಲಾರನ್ನು ರಾಜಭವನದಲ್ಲಿ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

yadiyurappa, vala, Siddaramaiah
ಯಡಿಯೂರಪ್ಪ, ವಾಲಾ, ಸಿದ್ದರಾಮಯ್ಯ

By

Published : Jul 8, 2021, 7:44 PM IST

ಬೆಂಗಳೂರು:ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

ಮೊದಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಂತರ ಸಿಎಂ ಯಡಿಯೂರಪ್ಪ ಸೌಹಾರ್ದವಾಗಿ ಭೇಟಿ ಮಾಡಲಿದ್ದು, ಚರ್ಚೆ ನಡೆಸಲಿದ್ದಾರೆ. ಕಳೆದ ಏಳು ವರ್ಷಗಳಿಂದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿರುವ ವಜುಬಾಯಿ ವಾಲಾ ನಿರ್ಗಮಿಸಲಿದ್ದಾರೆ.

ಇದನ್ನೂಓದಿ: ಮೋದಿ ಮಾದರಿಯಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಿಎಂ ಬಿಎಸ್​ವೈ ಚಿಂತನೆ

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವಜುಬಾಯಿ ವಾಲಾ ರಾಜ್ಯದ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದಾದ ಬಳಿಕ ಮೈತ್ರಿ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲೂ ವಾಲಾ ಇದ್ದರು. ಇದೀಗ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡು ವರ್ಷದ ಅವಧಿಯಲ್ಲಿ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಹಾಲಿ ಹಾಗೂ ಮಾಜಿ ಸಿಎಂಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜಭವನ ಸುತ್ತ ಬಿಗಿ ಪೊಲೀಸ್ ಭದ್ರತೆಯನ್ನು ವ್ಯವಸ್ಥೆ ಮಾಡಲಾಗಿದೆ.

ಮಧ್ಯಪ್ರದೇಶದ ಬಿಜೆಪಿ ನಾಯಕ ಥಾವರ್ ಚಂದ್​​ ಗೆಹ್ಲೊಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ.

ABOUT THE AUTHOR

...view details