ಬೆಂಗಳೂರು :ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಮೇಕೆದಾಟು ಪಾದಯಾತ್ರೆಗೆ ಅಡ್ಡಿ ವಿಚಾರವಾಗಿ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕಾರ್ಯಾಧ್ಯಕ್ಷರಾದ ಆರ್ ಧ್ರುವನಾರಾಯಣ, ರಾಮಲಿಂಗರೆಡ್ಡಿ, ಮಾಜಿ ಸಚಿವ ರಾಜಶೇಖರ ಪಾಟೀಲ, ಶಾಸಕ ಭೀಮಾ ನಾಯಕ್ ಈ ವೇಳೆ ಹಾಜರಿದ್ದರು. ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ ಮೇಕೆದಾಟು ಪಾದಯಾತ್ರೆಗೆ ಅಡ್ಡಿ ವಿಚಾರ ಕಾಂಗ್ರೆಸ್ ಉಭಯ ನಾಯಕರ ಮಧ್ಯೆ ಸುದೀರ್ಘ ಚರ್ಚೆ ನಡೆಯಿತು. ಪಾದಯಾತ್ರೆಯ ರೂಪುರೇಷೆಗಳ ಬಗ್ಗೆ ಮಾತುಕತೆ ನಡೆಯಿತು.