ಕರ್ನಾಟಕ

karnataka

ETV Bharat / state

ಮೋದಿ ಗುಜರಾತ್ ಸಿಎಂ ಆಗಿದ್ದಾಗಲೇ ಫೋನ್ ಕದ್ದಾಲಿಕೆ ಮಾಡಿದ ಕುಖ್ಯಾತರು: ಸಿದ್ದರಾಮಯ್ಯ - ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದಾರೆ

ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಲು ದಿಲ್ಲಿಗೆ ನಿನ್ನೆ ರಾತ್ರಿ ತೆರಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Jul 20, 2021, 10:42 PM IST

ಬೆಂಗಳೂರು: ನವದೆಹಲಿಯಲ್ಲಿರುವ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಲು ದಿಲ್ಲಿಗೆ ನಿನ್ನೆ ರಾತ್ರಿ ತೆರಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಭಾಗಿಯಾಗಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ. ಇದು ಬಿಜೆಪಿಯವರ "ಡರ್ಟಿ ಗೇಮ್". ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದಿದ್ದಾರೆ.

ಆಪ್ತನ ಫೋನ್ ಟ್ಯಾಪ್ ಆಗಿದೆ: ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಕಾಲದಲ್ಲಿ ನನ್ನ ಆಪ್ತ ಸಹಾಯಕನ ಪೋನ್ ಕರೆಗಳನ್ನು ಕೇಂದ್ರ ಸರ್ಕಾರ ಟ್ಯಾಪ್ ಮಾಡಿದೆ ಎನ್ನುವುದು ಅಚ್ಚರಿಯ ಸುದ್ದಿ ಅಲ್ಲ. ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ಹೇಸದವರು ಎನ್ನುವುದು ನಮಗೆ ಗೊತ್ತಿದೆ. ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ‌ ಎಂಬ‌ ಪಾತಕದ ಅಸ್ತ್ರಗಳು. ಸಮ್ಮಿಶ್ರ ಸರ್ಕಾರವನ್ನು‌ ಉರುಳಿಸಿ ಅಧಿಕಾರಕ್ಕೆ ಬರಲು ರಾಜ್ಯ ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಸುಳ್ಳೇ ಮನೆ ದೇವರು:ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ರಾಷ್ಟ್ರೀಯ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಹುಟ್ಟುಗುಣ ಸುಲಭದಲ್ಲಿ ಬಿಟ್ಟುಹೋಗುವುದಿಲ್ಲ ಎಂದಿದ್ದಾರೆ.

ಕೇಂದ್ರ ಸುಳ್ಳು ಹೇಳುತ್ತಿದೆ : ಟ್ವೀಟ್ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೇವಲ 2 ತಿಂಗಳ ಹಿಂದಷ್ಟೇ, ಚಾಮರಾಜನಗರದಲ್ಲಿ 36 ಕೋವಿಡ್ ರೋಗಿಗಳು ಆಮ್ಲಜನಕ ಇಲ್ಲದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇದು ಸರ್ಕಾರ ಮತ್ತು ಪ್ರಜೆಗಳ ನಡುವೆ ಬೆಳೆಯುತ್ತಿರುವ ಅಭಿಪ್ರಾಯಭೇದಕ್ಕೆ ಸಾಕ್ಷಿ. ಬಿಜೆಪಿ, ಜನರೊಂದಿಗಿನ ಸಂಪರ್ಕ ಕಳೆದುಕೊಂಡಿದೆ ಎಂದಿದ್ದಾರೆ.

ABOUT THE AUTHOR

...view details