ಬೆಂಗಳೂರು:75ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಗರದ ಮಹಾತ್ಮ ಗಾಂಧಿ ರಸ್ತೆಯ ಟ್ರಿನಿಟಿ ವೃತ್ತದಿಂದ 3.50 ಕಿ.ಮೀ. ಉದ್ದದ ಬೃಹತ್ ರಾಷ್ಟ್ರಧ್ವಜ ಅನಾವರಣ ಮಾಡಿದರು. ಇದೇ ವೇಳೆ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಶಾಸಕ ಎನ್ ಎ ಹ್ಯಾರಿಸ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತಿತರರು ಭಾಗವಹಿಸಿದ್ದರು. ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
ಬೃಹತ್ ರಾಷ್ಟ್ರಧ್ವಜ ಮೆರವಣಿಗೆಗೆ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಚಾಲನೆ ಈ ಕಾರ್ಯಕ್ರಮದ ಬಳಿಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ತೆರಳಿ ಅಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಹುಟ್ಟುಹಬ್ಬ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮಧ್ಯಾಹ್ನ 2 ಗಂಟೆಗೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಲ್ಲಾ ರಾಜ್ಯ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ಮಂಗಳೂರು ಕುದ್ರೋಳಿ ಕ್ಷೇತ್ರದಲ್ಲಿ 900 ಕೆಜಿ ಧಾನ್ಯಗಳಿಂದ ಅರಳಿದ ಬೃಹತ್ ತಿರಂಗಾ