ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ವಿರುದ್ಧದ ಆಕ್ರೋಶವನ್ನು ಮತ್ತೆ ಟ್ವೀಟ್ ಮೂಲಕ ಮುಂದುವರಿಸಿದ್ದಾರೆ.
ಬೆಳಿಗ್ಗೆ ಟ್ವೀಟ್ ಮಾಡಿ ಹೆಚ್‌ಡಿಕೆಗೆ ತಿರುಗೇಟು ನೀಡಿದ್ದ ಅವರು, ಇದೀಗ ಮತ್ತೆ ಟ್ವೀಟ್ ಮೂಲಕವೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ ಎಂದಿದ್ದಾರೆ.