ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ನಗರಗಳಲ್ಲಿ ರಾತ್ರಿ ಕರ್ಫ್ಯೂ ಹೇರಲು ಕೈಗೊಂಡಿರುವ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಷ್ಟೇ ಬಾಲಿಷ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ದೆಹಲಿಯಲ್ಲೊಬ್ಬರು ಪಾಳೆಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ. ರಾತ್ರಿ ತೆರೆದಿರುವ ಹೋಟೆಲ್, ಚಿತ್ರಮಂದಿರ ಮತ್ತು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ. ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಫ್ಯೂವಿನ ನಾಟಕ ಯಾಕೆ? ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಛೆ ಮುಖ್ಯಮಂತ್ರಿಗಳು ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು.