ಬೆಂಗಳೂರು: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಯೊಬ್ಬರು ಹಾಡೊಂದಕ್ಕೆ ಕುಣಿದು ಕುಪ್ಪಳಿಸಿ ಗಮನ ಸೆಳೆದಿದ್ದಾರೆ.
ಸಿದ್ದರಾಮಯ್ಯ ನಿವಾಸದ ಮುಂದೆ ಸಂಭ್ರಮಾಚರಣೆ ರಾಯಚೂರಿನಿಂದ ಬೆಂಗಳೂರಿಗೆ ಬಂದಿರುವ ಅಭಿಮಾನಿ ಆಂಜನೇಯ ಶಿವಾನಂದ ವೃತ್ತ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಎದುರು ಬರ್ಜರಿ ಸ್ಟೆಪ್ಸ್ ಹಾಕಿದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕುರಿ, ಕಂಬಳಿ ಕೊಟ್ಟು ಗಮನ ಸೆಳೆದಿದ್ದ ಆಂಜನೇಯ ಈ ಬಾರಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಸಿದ್ದರಾಮಯ್ಯ ಹುಟ್ಟು ಹಬ್ಬಕ್ಕೆ ಶುಭಕೋರಿದ ಕೆಪಿಸಿಸಿ ಅಧ್ಯಕ್ಷ ಅಭಿಮಾನಿಗಳ ಸಂಭ್ರಮಾಚರಣೆ:ಸಿದ್ದರಾಮಯ್ಯರ ಜನ್ಮದಿನ ಆಚರಿಸಲು ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ನೆಚ್ಚಿನ ನಾಯಕನನ್ನು ನೋಡಲು ಮುಗಿಬಿದ್ದ ಅಭಿಮಾನಿಗಳನ್ನು ನಿಯಂತ್ರಿಸುವುದು ಕಷ್ಟ ಸಾಧ್ಯವಾಯಿತು. ಕೇಕ್ ಕಟ್ ಮಾಡಲು ಬಂದ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಹೂವಿನ ಹಾರ ಹಾಕಿ ಸತ್ಕರಿಸಿದರು. ಮಾಜಿ ಸಿಎಂ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂಕುನುಗ್ಗಲು ಉಂಟಾಯಿತು.
ಗಣ್ಯರ ಅಭಿನಂದನೆ:ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಸಿಎಂ ಬಸವರಾಜ್ ಬೊಮ್ಮಯಿ, ಸಚಿವ ಡಾ.ಸಿ. ಎನ್ ಅಶ್ವತ್ಥ್ ನಾರಾಯಣ್, ಸಚಿವ ಶ್ರೀರಾಮುಲು, ಆದಿಚುಂಚನಗಿರಿ ನಿರ್ಮಾಲಾನಂದನಾಥ ಶ್ರೀಗಳು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಎನ್. ಸಿ.ಪಿ. ನಾಯಕ ಶರದ್ ಪವಾರ್ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ.
ಸಿದ್ಧರಾಮಯ್ಯರನ್ನ ಭೇಟಿಯಾದ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಬೆಂಗಳೂರಿನ ಕುಮಾರಪಾರ್ಕ್ ನಿವಾಸಕ್ಕೆ ಗುರುವಾರ ತೆರಳಿ ಜನ್ಮದಿನದ ಶುಭಾಶಯ ಕೋರಿದರು. ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧೃವನಾರಾಯಣ್, ಮಾಜಿ ಸಚಿವ ಕೃಷ್ಣಬೈರೇಗೌಡ ಅವರು ಉಪಸ್ಥಿತರಿದ್ದರು.