ಕರ್ನಾಟಕ

karnataka

ETV Bharat / state

ಕೊರೊನಾ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ - ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಮೇ 19ರ ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರು ಸಭೆಯಲ್ಲಿ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Opposition leader Siddaramaiah
ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ

By

Published : May 17, 2020, 8:07 PM IST

ಬೆಂಗಳೂರು: ಕೊರೊನಾ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಮಂಗಳವಾರ ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರು ಸಭೆಯಲ್ಲಿ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್​ಗಳು, ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿ ಚುನಾವಣೆ, ಮಾತೃಶ್ರೀ, ಸಾಂತ್ವನ ಸೇರಿದಂತೆ ವಿವಿಧ ಯೋಜನೆಗಳ ರದ್ದು ಹಾಗೂ ನಾನಾ ವಿಷಯಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

ಸರ್ಕಾರ ಕೈಗೊಂಡಿರುವ ಕ್ರಮಗಳು, ಮುಂದೆ ಕೈಗೆತ್ತಿಕೊಳ್ಳಬೇಕಾದ ಹೋರಾಟದ ಬಗ್ಗೆಯೂ ಸಭೆ ಚರ್ಚಿಸಲಿದೆ. ಶಾಸಕಾಂಗ ಸಭೆ ನಡೆಯುವ ಸ್ಥಳ ಇನ್ನೂ ನಿಗಧಿಯಾಗಿಲ್ಲ.

ABOUT THE AUTHOR

...view details