ಬೆಂಗಳೂರು:ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಕಾಂಗ್ರೆಸ್ ಹಾಗೂ ಇತರ ಬೆಂಬಲಿತ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ 3ರಂದು ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚಿಸಲು ತೀರ್ಮಾನಿಸಲಾಗಿದೆ.
ಜುಲೈ 3ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಸಂತನಗರದಲ್ಲಿರುವ 'ಶಾಂಗ್ರಿ-ಲಾ' ಹೋಟೆಲ್‌ನಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಎಲ್ಲ ಶಾಸಕರು ಪಾಲ್ಗೊಂಡು ಸಲಹೆ ಸೂಚನೆ ನೀಡುವಂತೆ ತಿಳಿಸಲಾಗಿದೆ. ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿರುತ್ತಾರೆ.