ಕರ್ನಾಟಕ

karnataka

ETV Bharat / state

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ - ಸಿದ್ದರಾಮಯ್ಯ ಟ್ವೀಟ್​

ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಿನ್ನೆ ಕಲಬುರ್ಗಿಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಖ್ಯಾತ ಲೇಖಕಿ ನಿಧನಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ನ ಇತರ ಹಲವು ನಾಯಕರು ತಮ್ಮ ಸಂತಾಪ ಸೂಚಿಸಿದ್ದಾರೆ.

Siddaramaiah
ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

By

Published : Jun 29, 2020, 9:22 AM IST

ಬೆಂಗಳೂರು: ಹಿರಿಯ ಸಾಹಿತಿ ಗೀತಾ ನಾಗಭೂಷಣ್ ನಿಧನಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಸಂಬಂಧ ಟ್ವೀಟ್ ಮಾಡಿರುವ ಅವರು, ’’ಹಿರಿಯ ಲೇಖಕಿ ‌ನಾಡೋಜ ಗೀತಾ ನಾಗಭೂಷಣ್ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಾಮಾಜಿಕ ಕ್ಷೇತ್ರದಲ್ಲಿಯೂ ಕ್ರಿಯಾಶೀಲರಾಗಿದ್ದ ಇವರ ಅಗಲಿಕೆಯಿಂದ ಮಹಿಳಾ ಪರವಾದ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಗಟ್ಟಿ ದನಿಯೊಂದು ಮೌನವಾದಂತಾಗಿದೆ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’’ ಎಂದು ತಿಳಿಸಿದ್ದಾರೆ.


78 ವರ್ಷದ ಗೀತಾ ನಾಗಭೂಷಣ್ ನಿನ್ನೆ ಕಲಬುರ್ಗಿಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಖ್ಯಾತ ಲೇಖಕಿ ನಿಧನಕ್ಕೆ ಕಾಂಗ್ರೆಸ್​ನ ಇತರ ಹಲವು ನಾಯಕರು ಕೂಡ ತಮ್ಮ ಸಂತಾಪ ಸೂಚಿಸಿದ್ದಾರೆ.

ABOUT THE AUTHOR

...view details