ಬೆಂಗಳೂರು: ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿನಂದಿಸಿದರು.
ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಅವಿರೋಧ ಆಯ್ಕೆ: ಸಿದ್ದರಾಮಯ್ಯ ಅಭಿನಂದನೆ - Ishwar Khandre
ರಾಜ್ಯದ 4 ರಾಜ್ಯಸಭೆ ಸ್ಥಾನಗಳಿಗೆ ಸ್ಪರ್ಧಿಸಿದ್ದ ನಾಲ್ವರೂ ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನಿಂದ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಖರ್ಗೆಯನ್ನು ಅಭಿನಂದಿಸಿದ ಸಿದ್ದರಾಮಯ್ಯ
ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೂಗುಚ್ಛ ನೀಡಿ ಸಿದ್ದರಾಮಯ್ಯ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹಮದ್ ಮತ್ತಿತರರು ಇದ್ದರು.