ಕರ್ನಾಟಕ

karnataka

ETV Bharat / state

ಸಿಎಂ ಹಾಗೂ ಸಚಿವ ಸುಧಾಕರ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ..

siddaramaiah
siddaramaiah

By

Published : May 3, 2021, 4:25 PM IST

ಬೆಂಗಳೂರು : ಚಾಮರಾಜನಗರ ಆಕ್ಸಿಜನ್ ದುರಂತ ಬಹಳ ನೋವು ತಂದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ.

ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details