ಬೆಂಗಳೂರು:ರೈತ ಹೋರಾಟಗಾರ, ಸಿಪಿಐ(ಎಂ) ಪಕ್ಷದ ಹಿರಿಯ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ನಲ್ಲಿ, ಸಿಪಿಐ(ಎಂ) ಪಕ್ಷದ ಹಿರಿಯ ನಾಯಕ ಮಾರುತಿ ಮಾನ್ಪಡೆ ಅವರ ನಿಧನದಿಂದ ದು:ಖಿತನಾಗಿದ್ದೇನೆ. ತಮ್ಮ ಇಡೀ ಬದುಕನ್ನೇ ರೈತರು, ಕಾರ್ಮಿಕರು, ಶೋಷಿತರ ಪರ ಹೋರಾಟಕ್ಕೆ ಮುಡಿಪಾಗಿಟ್ಟು ಅರ್ಥಪೂರ್ಣವಾಗಿ ಬದುಕಿದ ಕಾಮ್ರೆಡ್ ಮಾನ್ಪಡೆ ಅವರು ನನಗೂ ಆತ್ಮೀಯರಾಗಿದ್ದರು. ಅವರಿಗೆ ದು:ಖತಪ್ತ ವಿದಾಯ ಎಂದು ಬರೆದುಕೊಂಡಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಮಿಕ, ರೈತ ಹಾಗೂ ಶೋಷಿತ ವರ್ಗಗಳ ಪರವಾಗಿ ಸದಾ ಧ್ವನಿಯೆತ್ತುತ್ತಾ ಪ್ರಜಾಪ್ರಭುತ್ವ ಉಳಿವಿಗೆ ಅವಿರತ ಹೋರಾಟ ನಡೆಸುತ್ತಿದ್ದ ಕಾರ್ಮಿಕ ನಾಯಕ ಮಾರುತಿ ಮಾನ್ಪಡೆ. ಅವರು ನಿಧನರಾಗಿದ್ದು ದುಃಖದ ಸಂಗತಿ. ಮಾನ್ಪಡೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ಟರ್ನಲ್ಲಿ ಬರೆದಿದ್ದಾರೆ.