ಕರ್ನಾಟಕ

karnataka

ETV Bharat / state

ಮಣಿಪಾಲ್ ಆಸ್ಪತ್ರೆಯಿಂದ ಸಿದ್ದರಾಮಯ್ಯ ಬಿಡುಗಡೆ: ಇನ್ನೊಂದು ವಾರ ಮನೆಯಲ್ಲಿ ವಿಶ್ರಾಂತಿ - ಮಣಿಪಾಲ್ ಆಸ್ಪತ್ರೆ

ಕೊರೊನಾ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ‌ ಮುಖ್ಯಮಂತ್ರಿ‌ ಸಿದ್ಧರಾಮಯ್ಯ ಅವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Siddaramaiah
Siddaramaiah

By

Published : Aug 13, 2020, 4:01 PM IST

Updated : Aug 13, 2020, 4:56 PM IST

ಬೆಂಗಳೂರು:ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಎರಡನೇ ಬಾರಿಗೆ ನಡೆದ ಕೊರೊನಾ ಪರೀಕ್ಷೆಯಲ್ಲೂ ನೆಗೆಟಿವ್ ವರದಿ ಬಂದಿರುವ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೇ ವೇಳೆ ಅವರ ಮಗ ಹಾಗೂ ವರುಣ ಕ್ಷೇತ್ರದ ಶಾಸಕರಾಗಿರುವ ಯತೀಂದ್ರ ಸಿದ್ದರಾಮಯ್ಯ ಸಹ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.
ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ಕೊರೊನಾದಿಂದ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಸಿದ್ದರಾಮಯ್ಯ, ಯತೀಂದ್ರ

ಗುಣಮುಖರಾಗುವಂತೆ ತಮಗೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಅವರು ಧನ್ಯವಾದ ತಿಳಿಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ.

Last Updated : Aug 13, 2020, 4:56 PM IST

ABOUT THE AUTHOR

...view details