ಮಹಾರಾಷ್ಟ್ರ ಚುನಾವಣಾ ಅಖಾಡಕ್ಕೆ ಸಿದ್ದರಾಮಯ್ಯ.. ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರಾಗಿ ಪ್ರಚಾರ.. - ಉಪಚುನಾವಣಾ ಪ್ರಚಾರಕ್ಕೆ ಕೇರಳ ಪ್ರವಾಸ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಹಾರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರು:ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಹಾರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಅ.17ರಂದು ಸಿದ್ದರಾಮಯ್ಯ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕದ ಗಡಿ ಭಾಗವಾದ ಜತ್, ಸಾಂಗ್ಲಿ, ಅಕ್ಕಲಕೋಟ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇಡೀ ದಿನ ಕೈ ಅಭ್ಯರ್ಥಿಗಳ ಪರ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.
ಇನ್ನು, ಅ.19ರಂದು ಸಿದ್ದರಾಮಯ್ಯ ಕೇರಳದಲ್ಲಿ ಉಪಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. ಮಂಜೇಶ್ವರ ಉಪಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ಮಾಡಲಿದ್ದಾರೆ. ಈಗಾಗಲೇ ಬಿಜೆಪಿ ನಾಯಕರು ಮಹಾರಾಷ್ಟ್ರದಲ್ಲಿ ಮತಯಾಚನೆ ಮಾಡುತ್ತಿದ್ದು, ಇದೀಗ ರಾಜ್ಯ ಕೈ ನಾಯಕರು ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಕರ್ನಾಟಕದ ಗಡಿ ಭಾಗದಲ್ಲಿ ಗಣನೀಯ ಪ್ರಮಾಣದಲ್ಲಿ ಕನ್ನಡಿಗರಿದ್ದು, ಅವರನ್ನು ಸೆಳೆಯುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಮತ ಬೇಟೆ ನಡೆಸಲಿದ್ದಾರೆ.