ಬೆಂಗಳೂರು: ಸಿದ್ದರಾಮಯ್ಯ ತಮ್ಮ ಸರ್ಕಾರದ ಅವಧಿಯಲ್ಲಿ ಹಿಂದೂ ವಿರೋಧಿ ನೀತಿ ಜಾರಿಗೆ ತಂದಿದ್ದರು ಎಂದ ಬಿಜೆಪಿ ಶಾಸಕ ಹರೀಶ್ ಪೂಂಜ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಜಾರಿಗೆ ತಂದಿತ್ತು: ಶಾಸಕ ಹರೀಶ್ ಪೂಂಜ - Harish Poonja
ಸಿದ್ದರಾಮಯ್ಯ ಅವಧಿಯಲ್ಲಿ ಖಾಸಗಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯಲ್ಲಿ ನೋಂದಣಿ ಮಾಡುವ ಮೂಲಕ ಸರ್ಕಾರದ ಸುರ್ಪದಿಗೆ ತೆಗೆದುಕೊಳ್ಳುವ ನಿರ್ಧಾರ ಕೈಗೊಂಡು ಹಿಂದೂ ವಿರೋಧಿ ನೀತಿ ಜಾರಿಗೆ ತಂದಿದ್ದರು ಎಂದು ಶಾಸಕ ಹರೀಶ್ ಪೂಂಜ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ವಂದನಾ ನಿರ್ಣಯದ ಮೇಲೆ ಮಾತನಾಡಿದ ಹರೀಶ್ ಪೂಂಜ, ಸಿದ್ದರಾಮಯ್ಯ ಅವಧಿಯಲ್ಲಿ ಖಾಸಗಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯಲ್ಲಿ ನೋಂದಣಿ ಮಾಡುವ ಮೂಲಕ ಸರ್ಕಾರದ ಸುರ್ಪದಿಗೆ ತೆಗೆದುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಮೂಲಕ ಹಿಂದೂ ವಿರೋಧಿ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದರು.
ಆದರೆ ಬಿಎಸ್ವೈ ಸರ್ಕಾರ ಹಿಂದೂ ಪರವಾಗಿದೆ ಎಂದರು. ಹರೀಶ್ ಪೂಂಜ ಹೇಳಿಕೆಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಭೀಮಾನಾಯ್ಕ್ ಆಕ್ಷೇಪ ವ್ಯಕ್ತಪಡಿಸಿದರು. ನಾವೂ ಹಿಂದೂಗಳು ಎಂದು ಯತೀಂದ್ರ ಪ್ರತಿಪಾದಿಸಿದರು. ಹಿಂದೂ ವಿರೋಧಿ ನೀತಿ ಎಂಬ ಪದವನ್ನು ಕಡತದಿಂದ ತೆಗೆಯುವಂತೆ ಆಗ್ರಹಿಸಿದರು.