ಕರ್ನಾಟಕ

karnataka

By

Published : Apr 17, 2020, 1:55 PM IST

ETV Bharat / state

ಅಧಿಕಾರಿಗಳಿಂದ ಕೊರೊನಾ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ

ಕೊರೊನಾ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯುವ ಉದ್ದೇಶದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಕಚೇರಿಗೆ ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.

Siddaramaiah has received information about corona from govt authorities ..
ಅಧಿಕಾರಿಗಳಿಂದ ಕೊರೊನಾ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ

ಬೆಂಗಳೂರು :ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಕಚೇರಿಗೆ ಆಗಮಿಸಿದ್ದು, ಇಡೀ ದಿನ ಕಚೇರಿಯಲ್ಲಿರುವ ಅವರು ಕೊರೊನಾ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಅಧಿಕಾರಿಗಳಿಂದ ಕೊರೊನಾ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ

ಮೊದಲಿಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು. ಅದೇ ರೀತಿ, ಇತರ ಇಲಾಖೆಯ ಅಧಿಕಾರಿಗಳಿಂದ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.

ABOUT THE AUTHOR

...view details