ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ - siddaramaiah letter for kalyana karnataka development

ಸರ್ಕಾರ ಈ ವರ್ಷ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷ ಮಾಡಿರುವಂತೆ ಕಾಣುತ್ತದೆ. ಆರ್ಟಿಕಲ್ 371 ಜೆ ಅನ್ವಯ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

siddaramaiah letter to CM yediyurappa
ಯಡಿಯೂರಪ್ಪ- ಸಿದ್ದರಾಮಯ್ಯ

By

Published : Dec 10, 2020, 4:41 AM IST

ಬೆಂಗಳೂರು: ಆರ್ಟಿಕಲ್ 371 ಜೆ ಅನ್ವಯ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಆರ್ಟಿಕಲ್ 371ಜೆ ಆಡಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಸ್ತುತ ವರ್ಷ 1,300 ರೂ. ಕೋಟಿಗಳನ್ನು ಘೋಷಣೆ ಮಾಡಿರುವುದು ಸರಿಯಷ್ಟೆ. ಈಗಾಗಲೇ 9 ತಿಂಗಳು ಮುಗಿದು ಹೋಗುತ್ತಿವೆ. ಉಳಿದಿರುವುದು 3 ತಿಂಗಳು ಮಾತ್ರ. ಆದರೆ ಇದುವರೆಗೂ ಕೂಡ ಈ ಯೋಜನೆಯಡಿ ತೆಗೆದುಕೊಳ್ಳುವ ಕಾಮಗಾರಿಗಳ ಕ್ರಿಯಾ ಯೋಜನೆಗಳನ್ನೆ ಅನುಮೋದನೆ ಮಾಡಿಲ್ಲ. ಹೀಗಿರುವಾಗ ಕ್ರಿಯಾ ಯೋಜನೆಗಳನ್ನು ಅನುಮೋದ ಮಾಡುವುದು ಯಾವಾಗ? ಟೆಂಡರ್ ಕರೆಯುವರು ಯಾವಾಗ? ಕಾಮಗಾರಿಗಳನ್ನು ಪ್ರಾರಂಭಿಸುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಗೋ ಹತ್ಯೆ ನಿಷೇಧ ಕಾನೂನು ಅಂಗೀಕಾರ: ಇಂದು ತುರ್ತು ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ

ಇದನ್ನೆಲ್ಲಾ ನೋಡಿದರೆ ಸರ್ಕಾರ ಈ ವರ್ಷ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷ ಮಾಡಿರುವಂತೆ ಕಾಣುತ್ತದೆ. ಹಿಂದುಳಿದ ಪ್ರದೇಶದ ಅಭಿವೃದ್ಧಿಗೆಂದು ಹಿಂದಿನ ಯುಪಿಎ. ಸರ್ಕಾರ ಆರ್ಟಿಕಲ್ 371ಜೆ ಕೆಳಗೆ ವಿಶೇಷ ಸ್ಥಾನಮಾನವನ್ನು ನೀಡಿತ್ತು. ಆದರೆ, ಪ್ರಸ್ತುತ ಸರ್ಕಾರ ಅದರ ಮೂಲ ಉದ್ದೇಶವನ್ನೇ ಮರೆತಂತೆ ಕಾಣುತ್ತಿದೆ. ಆದರಿಂದ, ಯಾವ ಕಾರಣಕ್ಕೂ ಈ ಪ್ರದೇಶಗಳನ್ನು ನಿರ್ಲಕ್ಷಿಸದೆ ಕೂಡಲೇ ಘೋಷಣೆ ಮಾಡಿದ ಅನುದಾನಕ್ಕೆ ಕ್ರಿಯಾ ಯೋಜನೆಗಳನ್ನು ಅನುಮೋದಿಸಿ ಟೆಂಡರ್ ಕರೆದು ಗುಣಮಟ್ಟದ ಕಾಮಗಾರಿಗಳನ್ನು ಕೈಗೊಂಡು ನ್ಯಾಯ ಒದಗಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details