ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಸಣ್ಣ ಕೈಗಾರಿಕೆ ಸಂಘಗಳ ಸಭೆ ಕರೆದಿದ್ದಾರೆ.
ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ಕುರಿತು ಸಿದ್ದರಾಮಯ್ಯ ಸಭೆ.. - ಲಾಕ್ ಡೌನ್
ಮಧ್ಯಾಹ್ನ 3 ಗಂಟೆಗೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳು, ಗಾರ್ಮೆಂಟ್ಸ್ ಕಾರ್ಮಿಕರ ಸಂಘಗಳ ಪದಾಧಿಕಾರಿಗಳ ಜೊತೆಗೂ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಲಿದ್ದಾರೆ.
ವಿಧಾನಸೌಧದ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ 11 ಗಂಟೆಗೆ ನಡೆಯಲಿರುವ ಇಂದಿನ ಸಭೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆ ಸಂಘ ಹಾಗೂ ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳು, ಗಾರ್ಮೆಂಟ್ಸ್ ಕಾರ್ಮಿಕರ ಸಂಘಗಳ ಪದಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಲಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ರೈತರು ಹಾಗೂ ಶ್ರಮಿಕ ವರ್ಗದವರ ಸಮಸ್ಯೆ ಆಲಿಸಲು, ಸಾಂಪ್ರದಾಯಿಕ ವೃತ್ತಿಪರರು ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚಿಸಲು ಪ್ರತ್ಯೇಕ ಸಭೆ ನಡೆಸಿದ್ದರು. ಇದೀಗ ಮೂರನೇ ಸಭೆಯಾಗಿ ಇಂದು ಸಣ್ಣ ಕೈಗಾರಿಕೆಗಳ ಸಮಸ್ಯೆ ಸಂಬಂಧ ಚರ್ಚಿಸಲಿದ್ದಾರೆ.