ಬೆಂಗಳೂರು/ದೆಹಲಿ:ದೆಹಲಿಯ ಎಐಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯ ನಾಯಕರು, ಶಾಸಕರು, ಮುಖಂಡರೊಂದಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಖಂಡಿಸಿ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಿದ್ದು, ಪೂರ್ವಭಾವಿಯಾಗಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿದರು.
ಅಗ್ನಿಪಥ್ ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಶಕ್ತಿಪ್ರದರ್ಶನಕ್ಕೆ ಮುಂದಾಗಿದೆ. ದೆಹಲಿಯ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಸಾಧ್ಯವಾದಷ್ಟು ಹೆಚ್ಚು ಜನರನ್ನು ಸೇರಿಸಿ ಶಕ್ತಿಪ್ರದರ್ಶನ ಮಾಡಲು ಕೈ ಹೈಕಮಾಂಡ್ ತಯಾರಿ ಮಾಡಿಕೊಂಡಿದೆ.