ಬೆಂಗಳೂರು:ಅತಿವೃಷ್ಟಿ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರ ತ್ವರಿತಗತಿಯಲ್ಲಿ ಕಾರ್ಯ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸರ್ಕಾರ ಹಾಗೂ ಮಂತ್ರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ನೆರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲ ಎಂಬ ವಿಚಾರದ ಅಡಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಲೇವಡಿ ಮಾಡಿದ್ದಾರೆ.
ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಗೋವಿಂದ ಕಾರಜೋಳ ಅವರೇ? ಎಂದು ಕೇಳಿರುವ ಸಿದ್ದರಾಮಯ್ಯ ತಾವು ಬರೆದ ಪತ್ರದ ಪ್ರತಿ ಲಗತ್ತಿಸಿದ್ದಾರೆ.
ಸಚಿವರಿಗೆ ಸಿದ್ದರಾಮಯ್ಯ ಪ್ರಶ್ನೆ: