ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಏನೇ ಮಾತನಾಡಿದರು ಅದನ್ನು ಕಡೆಗಣಿಸಬೇಕೆಂಬ ತೀರ್ಮಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಬಂದಿದ್ದಾರೆ.
ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ನಡೆಸಲಾಯಿತು. ಈ ವೇಳೆ ನಾಯಕರು ಇಂತದೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಕುಮಾರಸ್ವಾಮಿಯವರ ಲೂಸ್ ಟಾಕ್ಗಳಿಗೆ ನಾವು ಯಾವುದೇ ರೀತಿಯ ಬೆಲೆ ಕೊಡುವುದು ಬೇಡ. ಅವರನ್ನು ನಿರ್ಲಕ್ಷಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಕಾಂಗ್ರೆಸ್ ವಿರುದ್ಧದ ಕುಮಾರಸ್ವಾಮಿ ಹೇಳಿಕೆಗಳಿಗೆ ಬಹಳ ಮನ್ನಣೆ ಕೊಡೋದು ಬೇಡ. ಕುಮಾರಸ್ವಾಮಿ ಲೂಸ್ ಟಾಕ್ ಅಂತಲೇ ಪರಿಗಣಿಸೋಣ. ಹಿರಿಯ ನಾಯಕರು ಯಾರೂ ಕೂಡ ಕುಮಾರಸ್ವಾಮಿ ಮಾತಿಗೆ ಪ್ರತಿಕ್ರಿಯೆ ಕೊಡೋದು ಬೇಡ. ಕೇವಲ ಶಾಸಕರು ಮಾತ್ರ ಕುಮಾರಸ್ವಾಮಿಗೆ ಉತ್ತರ ಕೊಟ್ಟರೆ ಸಾಕು. ಇಲ್ಲದಿದ್ದರೆ ಕುಮಾರಸ್ವಾಮಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ. ಅದನ್ನೇ ಬಿಜೆಪಿ ಕೂಡ ಲಾಭ ಮಾಡಿಕೊಳ್ಳಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಇದನ್ನೂ ಓದಿ:ನಾಳೆಯಿಂದ ಅಧಿವೇಶನ: ಸಿದ್ದರಾಮಯ್ಯ ನಿವಾಸದಲ್ಲಿ ಉಭಯ ಸದನಗಳ ಕಾಂಗ್ರೆಸ್ ನಾಯಕರ ಸಭೆ
ಪರಿಷತ್ನಲ್ಲಿ ಜೆಡಿಎಸ್ ನಮಗೆ ಕೈ ಕೊಡುವುದು ಪಕ್ಕಾ. ಆದರೆ ಜೆಡಿಎಸ್ ಮೋಸ ಮಾಡಿದೆ ಎಂಬುದನ್ನೇ ನಾವು ಪ್ರಚಾರ ಮಾಡಿದರೆ ಸಾಕು. ಯಾವುದೇ ಕಾರಣಕ್ಕೂ ಮತ್ತೆ ಜೆಡಿಎಸ್ ಬೆಂಬಲ ಪಡೆಯುವ ಅಗತ್ಯವಿಲ್ಲ. ಪರಿಷತ್ ಸಭಾಪತಿ ಆಯ್ಕೆ ವಿಚಾರದಲ್ಲಿ ಸೋಲಾದರೂ ಚಿಂತೆಯಿಲ್ಲ, ಮುಂದೆ ಯಾವತ್ತೂ ಜೆಡಿಎಸ್ ಬೆಂಬಲ ಕೇಳುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಇದೆ. ಹಿರಿಯ ನಾಯಕರ ಸಭೆಯಲ್ಲಿ ಹೆಚ್ಡಿಕೆ ಅಸ್ತ್ರಕ್ಕೆ ಕಡೆಗಣನೆಯ ಪ್ರತ್ಯಸ್ತ್ರ ನಿಮ್ಮ ತೀರ್ಮಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು .