ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ವಿರುದ್ಧ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸೋತರೆ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಜೆ.ಪಿ ನಡ್ದಾ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ ಮೋದಿ ಅವರ ಆಶೀರ್ವಾದ ಬೇಕಿದ್ದರೆ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ನಡ್ಡಾ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ ಎಂದಿದ್ದಾರೆ.
ಜೆ.ಪಿ ನಡ್ದಾ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ದಾ ಮತ್ತು ರಾಷ್ಟ್ರೀಯ ಬಿಜೆಪಿ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ, ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಜೆ.ಪಿ ನಡ್ದಾ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಬಲರಾಮನ ಸಾವಿಗೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ:14 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಆನೆ ಬಲರಾಮನ ಸಾವಿಗೆ ಸಂತಾಪ ಸೂಚಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮೈಸೂರು ದಸರೆಯ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ಬಲರಾಮ ಇನ್ನಿಲ್ಲ ಎಂಬ ಸುದ್ದಿ ತಿಳಿದು ನೋವಾಯಿತು. 14 ಬಾರಿ ಚಿನ್ನದ ಅಂಬಾರಿ ಹೊರುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಬಲರಾಮ ಇಂದು ನಮ್ಮ ನಡುವೆ ಇಲ್ಲದಿದ್ದರೂ, ಅವನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ ಎಂದಿದ್ದಾರೆ.
ಇದನ್ನೂ ಓದಿ:ಚುನಾವಣಾ ಜಾಹೀರಾತಿಗೆ ಆಯೋಗದ ಪೂರ್ವಾನುಮತಿ ಕಡ್ಡಾಯ: ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾರ್ಗಸೂಚಿ ಬಿಡುಗಡೆ