ಬೆಂಗಳೂರು: ಮಂಗಳೂರು ಆಟೋರಿಕ್ಷಾ ಬ್ಲಾಸ್ಟ್ಗೆ ಮಾಜಿ ಮುಖ್ಯಮಂತ್ರಿ ಟ್ವಿಟ್ಟರ್ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಂಗಳೂರು ಸ್ಫೋಟ ಪ್ರಕರಣ: ತ್ವರಿತ ತನಿಖೆಯಾಗಿ ದುಷ್ಕರ್ಮಿಗಳಿಗೆ ಶಿಕ್ಷೆಯಾಗಲಿ: ಸಿದ್ದರಾಮಯ್ಯ
ಮಂಗಳೂರು ಸ್ಫೋಟ ಪ್ರಕರಣ ತ್ವರಿತಗತಿಯ ತನಿಖೆಯಾಗಲಿ ಹಾಗೂ ದುಷ್ಕರ್ಮಿಗಳಿಗೆ ಸೂಕ್ತ ಶಿಕ್ಷೆಯಾಗಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮುಖಾಂತರ ಒತ್ತಾಯಿಸಿದ್ದಾರೆ.
ಮಂಗಳೂರು ಸ್ಫೋಟ ಘಟನೆ ತನಿಖೆಯಾಗಿ ದುಷ್ಕರ್ಮಿಗಳಿಗೆ ಶಿಕ್ಷೆಯಾಗಲಿ: ಸಿದ್ದರಾಮಯ್ಯ
ಗೃಹ ಇಲಾಖೆ ವೈಫಲ್ಯ:ಮಂಗಳೂರು ಬಾಂಬು ಸ್ಫೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಅಹಿಂದ ವೋಟ್ ಡಿಲಿಷನ್ ಬಿಜೆಪಿಗರ ಕುತಂತ್ರ: ಸಿದ್ದರಾಮಯ್ಯ ವಾಗ್ದಾಳಿ