ಬೆಂಗಳೂರು: ರವಿ ಗಾಣಿಗ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎರಡೂವರೆ ವರ್ಷಗಳ ಬಳಿಕ ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ನಾನು ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಇರ್ತಾರೆ ಅಂತ ನಾನು ಹೇಳ್ತೇನೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಲವರು ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಆಗಿರಬೇಕು ಎಂದುಕೊಂಡರೆ, ಇನ್ನೂ ಕೆಲವು ಎರಡೂವರೆ ವರ್ಷಗಳ ಬಳಿಕೆ ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಅಂದುಕೊಳ್ಳುತ್ತಾರೆ. ಹೀಗೆ ಯಾರು ಸಿಎಂ ಆಗಬೇಕು ಎನ್ನುವುದರ ಬಗ್ಗೆ ಒಬೊಬ್ಬರದ್ದು ಒಂದೊಂದು ರೀತಿ ಅಭಿಪ್ರಾಯ ಇರುತ್ತೆ. ಇದು ಅವರವರ ಅಭಿಪ್ರಾಯ ಅಷ್ಟೇ. ಆದರೆ ಎಲ್ಲಾ ಅಂತಿಮ ನಿರ್ಣಯವನ್ನು ಹೈಕಮಾಂಡ್ ಮಾಡುತ್ತದೆ. ನಿಮ್ಮ ಅಭಿಪ್ರಾಯ ಏನು ಎಂಬ ಪ್ರಶ್ನೆಗೆ, ನನ್ನ ಅಭಿಪ್ರಾಯ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿರಬೇಕು ಅನ್ನೋದು ಎಂದರು.
ಎರಡೂವರೆ ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಾವಣೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, ಸಿಎಂ ಬದಲಾವಣೆ ಅಥವಾ ಅವರನ್ನೇ ಮುಂದುವರಿಸುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಮುಖ್ಯಮಂತ್ರಿ ಆಯ್ಕೆಯಿಂದ ಹಿಡಿದು ಎಲ್ಲವೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಹೈಕಮಾಂಡ್ ಹಂತದಲ್ಲಿ ಏನು ಚರ್ಚೆ ಆಗಿದೆ ಎನ್ನುವುದು ನಮಗೆ ಗೊತ್ತಿಲ್ಲ ಎಂದರು ಹೇಳಿದರು.