ಕರ್ನಾಟಕ

karnataka

ETV Bharat / state

ಗಡಿ ವಿವಾದ ಸೃಷ್ಟಿಸಿ ರಾಜಕೀಯ ಮಾಡುವುದು ಬಿಜೆಪಿ ಹುಟ್ಟುಗುಣ: ಸಿದ್ದರಾಮಯ್ಯ - Siddaramaiah Slams BJP on Border Issue

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Dec 8, 2022, 11:11 AM IST

Updated : Dec 8, 2022, 11:53 AM IST

ಬೆಂಗಳೂರು: ಗಡಿ ವಿವಾದವನ್ನು ಹುಟ್ಟುಹಾಕಿ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಬಿಜೆಪಿ ಪಕ್ಷದ ಹುಟ್ಟುಗುಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿ ವಿವಾದ ಎಂಬ ಟ್ಯಾಗ್ ಲೈನ್ ಅಡಿ ಟ್ವೀಟ್ ಮಾಡಿರುವ ಅವರು, ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿ ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದಿದ್ದಾರೆ.

ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಬಿಜೆಪಿ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರಿಗೆ ಪ್ರಯಾಣ:ಇಂದು ಮತ್ತು ನಾಳೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿದ್ದರಾಮಯ್ಯ ಇಂದು ಬೆಂಗಳೂರಿನ ಶಿವಾನಂದ ವೃತ್ತದ ಸರ್ಕಾರಿ ನಿವಾಸದಿಂದ ಮೈಸೂರಿಗೆ ಪ್ರಯಾಣ ಬೆಳೆಸಿದರು. ವಿವಿಧ ಕಾಮಗಾರಿಗಳಿಗೆ ಚಾಲನೆ, ಕಟ್ಟಡ ಮತ್ತು ಸೇತುವೆ ಉದ್ಘಾಟನೆ ಜೊತೆ ಸ್ಥಳೀಯ ನಾಯಕರ ಜೊತೆಗೂ ಸಭೆ ನಡೆಸಲಿದ್ದಾರೆ. 2023 ವಿಧಾನಸಭೆ ಚುನಾವಣೆಗೆ ನಿರಂತರವಾಗಿ ಕ್ಷೇತ್ರ ಹುಡುಕಾಟದಲ್ಲಿ ತೊಡಗಿರುವ ಅವರು ಅಂತಿಮವಾಗಿ ವರುಣ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದಕ್ಕೆ ಪೂರಕವೆಂಬಂತೆ ವರುಣ ವ್ಯಾಪ್ತಿಯ ಸುತ್ತಮುತ್ತಲಿನ ವಿವಿಧ ಕಡೆಗಳಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

(ಓದಿ: ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಕಿಡಿಗೇಡಿಗಳು)

Last Updated : Dec 8, 2022, 11:53 AM IST

ABOUT THE AUTHOR

...view details