ಕರ್ನಾಟಕ

karnataka

ETV Bharat / state

'ಭಾರತೀಯ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕೇಂದ್ರದ ಅನಿಶ್ಚಿತ, ಬೇಜವಾಬ್ದಾರಿ ನಿಲುವು ಕಾರಣ' - ಪ್ರಧಾನಿ ಮೋದಿ, ಪ್ರಹ್ಲಾದ ಜೋಶಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಉಕ್ರೇನ್​​ಗೆ ವ್ಯಾಸಂಗಕ್ಕೆ ತೆರಳಿರುವ ವಿದ್ಯಾರ್ಥಿಗಳ ಬಗ್ಗೆ ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೀಡಿರುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Siddaramaiah slams Pralhad Joshi PM Modi
ಪ್ರಧಾನಿ ಮೋದಿ, ಪ್ರಹ್ಲಾದ ಜೋಶಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

By

Published : Mar 2, 2022, 9:49 PM IST

ಬೆಂಗಳೂರು: 'ಯುದ್ಧಗ್ರಸ್ತ ಉಕ್ರೇನ್​​​ನಲ್ಲಿ ಸಂಕಷ್ಟಕ್ಕೀಡಾಗಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ,ನಿಲುವುಗಳೇ ಕಾರಣ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಉಕ್ರೇನ್​​ ಮತ್ತು ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ದ ಸ್ಫೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶ್ವದ ಹಲವಾರು ದೇಶಗಳು ಅಲ್ಲಿರುವ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿದ್ದವು. ಆದರೆ ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.

ತನ್ನನ್ನು ವಿಶ್ವಗುರು ಎಂದು ಕೊಂಡಾಡುತ್ತಾ ಭಕ್ತರು ನಡೆಸುತ್ತಿರುವ ಬಹುಪರಾಕ್ ಭಜನೆಗೆ ಪ್ರಧಾನಿಯವರು ತಲೆ ತೂಗುತ್ತಾ ಕಾಲಹರಣ ಮಾಡಿದರೆ ವಿನಹ ಯುದ್ಧಗ್ರಸ್ತ ಉಕ್ರೇನ್​​ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನನೀಡಲೇ ಇಲ್ಲ. ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಎಂದು ಸರಣಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪೋಷಕರ ಸಂತಸಕ್ಕೆ ಪಾರವೇ ಇಲ್ಲ.. ಉಕ್ರೇನ್​​ನಿಂದ ಬಂದ ಮಕ್ಕಳನ್ನ ತಬ್ಬಿ ಕಣ್ಣೀರಿಟ್ಟ ಕುಟುಂಬಸ್ಥರು!

For All Latest Updates

TAGGED:

ABOUT THE AUTHOR

...view details