ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನ ನಾಡಧ್ವಜ ಹಾರಿಸದೆ ಹಲವಾರು ಜಿಲ್ಲಾಡಳಿತಗಳು ಅಗೌರವ ತೋರಿಸಿರುವುದು ಖಂಡನೀಯ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯೋತ್ಸವದ ದಿನ ನಾಡ ಧ್ವಜ ಹಾರಿಸದ ಜಿಲ್ಲಾಡಳಿತದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ - kannada rajyotsava
ನಾಡಧ್ವಜ ಹಾರಿಸದೆ ಹಲವಾರು ಜಿಲ್ಲಾಡಳಿತಗಳು ಅಗೌರವ ತೋರಿಸಿವೆ. ಇದು ಖಂಡನೀಯ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
![ರಾಜ್ಯೋತ್ಸವದ ದಿನ ನಾಡ ಧ್ವಜ ಹಾರಿಸದ ಜಿಲ್ಲಾಡಳಿತದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ Siddaramaiah spark against BJP Govt](https://etvbharatimages.akamaized.net/etvbharat/prod-images/768-512-9406863-634-9406863-1604334992100.jpg)
ಕನ್ನಡ ರಾಜ್ಯೋತ್ಸವದ ದಿನ ಕನ್ನಡ ಧ್ವಜವನ್ನು ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾರಿಸುವ ಸಂಪ್ರದಾಯವನ್ನು ಹಿಂದಿನ ಎಲ್ಲ ಸರ್ಕಾರಗಳು ಪಾಲಿಸುತ್ತಾ ಬಂದಿವೆ. ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿಯವರೇ ನಾಡಧ್ವಜ ಆರೋಹಣವನ್ನು ವಿರೋಧಿಸಿದ್ದು, ಜನಾಕ್ರೋಶಕ್ಕೆ ಕಾರಣವಾಗಿತ್ತು. ನಾನು ಮುಖ್ಯಮಂತ್ರಿಯಾಗಿದ್ದಾಗ ತಜ್ಞರ ಸಮಿತಿಯನ್ನು ಆಧರಿಸಿ ನಾಡಧ್ವಜವನ್ನು ವಿನ್ಯಾಸ ಮಾಡಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದೆ. ಎರಡು ವರ್ಷಗಳಾದರೂ ಅದಕ್ಕೆ ಅಂಗೀಕಾರ ನೀಡದೆ ಇರುವುದು ಕರ್ನಾಟಕದ ನಾಡಧ್ವಜದ ಬಗ್ಗೆ ಬಿಜೆಪಿಗೆ ಇರುವ ಪೂರ್ವಗ್ರಹಕ್ಕೆ ಸಾಕ್ಷಿ ಎಂದಿದ್ದಾರೆ.
ನಾವೇನು ಪ್ರತ್ಯೇಕ ಧ್ವಜವನ್ನು ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಆಗಿರುವ ಧ್ವಜ ಹೊಂದಲು ಸಂವಿಧಾನದಲ್ಲಿ ಯಾವ ಅಡ್ಡಿಯೂ ಇಲ್ಲ. ಬಿಜೆಪಿಯ ಕೇಂದ್ರ ನಾಯಕರ ಅಭಿಪ್ರಾಯವೇನೇ ಇರಲಿ, ಆ ಪಕ್ಷದ ಸ್ಥಳೀಯ ನಾಯಕರು ಪ್ರಧಾನ ಮಂತ್ರಿ ಮೇಲೆ ಒತ್ತಡ ಹೇರಿ ಕರ್ನಾಟಕದ ನಾಡಧ್ವಜಕ್ಕೆ ಅಧಿಕೃತ ಮನ್ನಣೆ ಸಿಗುವಂತೆ ಮಾಡಬೇಕು ಎಂದಿದ್ದಾರೆ.