ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ಮಾಜಿ ಸಿಎಂ ಸಿದ್ದರಾಮಯ್ಯ ಚಾಮರಾಜಪೇಟೆಯ ಮಾದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವರಾತ್ರಿ ಪ್ರಯುಕ್ತ ಮಾದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ - ಚಾಮರಾಜಪೇಟೆ ಮಾದೇಶ್ವರ ದೇವಾಲಯ
ಶಿವರಾತ್ರಿ ಹಬ್ಬದ ಪ್ರಯುಕ್ತ ಸಿದ್ದರಾಮಯ್ಯ ಅವರ ಜೊತೆ ಶಾಸಕ ಜಮೀರ್ ಅಹಮ್ಮದ್ ಕೂಡ ಮಹದೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.
ಸಿದ್ಧರಾಮಯ್ಯ
ವಿಶೇಷ ಅಂದ್ರೆ ಸಿದ್ದರಾಮಯ್ಯ ಅವರ ಜೊತೆ ಮಾಜಿ ಸಚಿವ ಜಮೀರ್ ಅಹಮ್ಮದ್ ಕೂಡ ಮಹದೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ.
ಇನ್ನು ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಭಕ್ತಾದಿಗಳು ಶಿವನ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ನಗರದ ಗವಿಗಂಗಾಧರೇಶ್ವರ, ಮಲೆಮಹದೇಶ್ವರ, ಕಾಡು ಮಲ್ಲೇಶ್ವರ, ಬನಶಂಕರಿಯ ಉಮಾಮಹೇಶ್ವರ ದೇವಾಲಯಗಳಲ್ಲಿ ವಿಶೇಷವಾಗಿ ಶಿವಲಿಂಗವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿದೆ. ಅಲ್ಲದೆ ಇಂದು ರಾತ್ರಿ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.