ಬೆಂಗಳೂರು: ಪಿಎಸ್‌ಐ, ಸಹಾಯಕ ಪ್ರಾಧ್ಯಾಪಕರು ಹಾಗೂ ಬ್ರೇಕ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣಗಳ ಬೆನ್ನಲ್ಲೇ ಕೆಪಿಟಿಸಿಎಲ್ ಪರೀಕ್ಷಾ ಹಗರಣ ನಡೆದಿದ್ದು ಸರ್ಕಾರದ ಯೋಗ್ಯತೆಗೆ ಕನ್ನಡಿ ಹಿಡಿದಂತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಇನ್ನೂ ಮುಗಿದಿಲ್ಲ. ಈ ಪ್ರಕರಣದ ಹಿರಿ ತಲೆಗಳನ್ನು ಇನ್ನೂ ಬಂಧಿಸಿಲ್ಲ, ಆಗಲೇ ಕೆಪಿಟಿಸಿಎಲ್ ಕಿರಿಯ ಅಭಿಯಂತರರ ನೇಮಕಾತಿಗಾಗಿ ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು, ಲಕ್ಷಗಟ್ಟಲೆ ಹಣ ಕೈ ಬದಲಾಗಿರುವುದು ಸರ್ಕಾರದ ಯೋಗ್ಯತೆಗೆ ಕನ್ನಡಿ ಎಂದಿದ್ದಾರೆ.