ಬೆಂಗಳೂರು:ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ ಎಂದು ಹೇಳಿಕೊಂಡಿರುವ ಸರ್ಕಾರದ ಪ್ರಕಟಣೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸುರಕ್ಷಿತವಾಗಿ ನಡೆದಿದೆ ಎಂದು ಸರ್ಕಾರದ ಕಾಲೆಳೆದ ಸಿದ್ದರಾಮಯ್ಯ - ಸಿದ್ದರಾಮಯ್ಯ ಲೇಟೆಸ್ಟ್ ನ್ಯೂಸ್
ಕೊರೊನಾ ನಡುವೆಯೇ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಸರ್ಕಾರದ ಕಾಲೆಳೆದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲಾಗಿದೆ ಎಂದು ಊಹಿಸಿಕೊಂಡು ಅದರಿಂದ ಪ್ರಭಾವಿತರಾಗಿ ಹಾಗೂ ಪ್ರೇರೇಪಣೆಗೊಂಡು ಅತಿಯಾದ ಆತ್ಮವಿಶ್ವಾಸದೊಂದಿಗೆ ಮಾತನಾಡುತ್ತಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ. ಆದರೆ ನಿಖರವಾದ ಫಲಿತಾಂಶವನ್ನು ತಿಳಿಯಲು ನಾವು ಇನ್ನೂ 15 ದಿನಗಳವರೆಗೆ ಕಾಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಜೂನ್ 15 ರಿಂದ ಜುಲೈ 20 ರವರೆಗೆ ವರದಿಯಾದ / ವರದಿ ಮಾಡಿದ ಎಲ್ಲಾ ಕೋವಿಡ್ ಪಾಸಿಟಿವ್ ರೋಗಿಗಳಿಂದ ದಾಖಲೆಯನ್ನು ಸಂಗ್ರಹಿಸಬೇಕು. ಅವರ ಯಾವುದೇ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಬರೆದ್ದಾರೆ ಎಂದು ಪರಿಶೀಲಿಸುವುದು ಒಳಿತು. ಎಲ್ಲಾ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಬಹುದೇ ಎಂದು ಮೌಲ್ಯಮಾಪನ ಮಾಡಲು ಸರ್ಕಾರಕ್ಕೆ ಇದು ಸಹಾಯ ಮಾಡುತ್ತದೆ ಎಂದು ಸಲಹೆ ಕೊಟ್ಟಿದ್ದಾರೆ.