ಬೆಂಗಳೂರು:ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಇಬ್ಬರ ಕುಟುಂಬವನ್ನು ಭೇಟಿಯಾಗುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ಕುರಿತು ಮಾತನಾಡಿದ ಅವರು ಮಂಗಳೂರಿನಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಸಂವಿಧಾನದ ಮೇಲೆ ನಂಬಿಕೆ ಇಲ್ಲದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಸೂದೆಗಳಿಂದ ಜನ ಕೆರಳಿದ್ದಾರೆ. ಪ್ರಶ್ನಿಸಿದವರನ್ನು ಗುಂಡಿಕ್ಕಿ ಕೊಲ್ಲುತ್ತಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ನಾನು ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಈ ಘಟನೆ ಬ್ರಿಟಿಷರ ಕಾಲಘಟ್ಟವನ್ನು ನೆನಪಿಸುತ್ತದೆ. ಜಲಿಯಾನಾ ವಾಲಾಭಾಗ್ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಹೇಗೆ ಗುಂಡಿಕ್ಕಿ ಕೊಲ್ಲಲಾಯಿತೋ ಅದೇ ರೀತಿ ಇಲ್ಲೂ ಸಹ ನಡೆಯುತ್ತಿದೆ.