ಕರ್ನಾಟಕ

karnataka

ETV Bharat / state

'ಅಸಮರ್ಥರ ಕೈಗೆ ಅಧಿಕಾರ ಕೊಟ್ಟ ತಪ್ಪಿಗೆ ಜನ ಶಿಕ್ಷೆಗೊಳಗಾಗುತ್ತಿದ್ದಾರೆ' - ಬೆಂಗಳೂರು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​

ಅಸಮರ್ಥರ ಕೈಗೆ ಅಧಿಕಾರ ಕೊಟ್ಟ ತಪ್ಪಿಗೆ ಜನ ಶಿಕ್ಷೆಗೊಳಗಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

siddaramaiah
ಸಿದ್ದರಾಮಯ್ಯ

By

Published : Jan 2, 2020, 7:56 AM IST

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮರ್ಥರ ಕೈಗೆ ಅಧಿಕಾರ ಕೊಟ್ಟ ತಪ್ಪಿಗೆ ಜನ ಶಿಕ್ಷೆಗೊಳಗಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹೊಸ ವರ್ಷದ ಅಚ್ಚೇ ದಿನ್ ಇನ್ನಷ್ಟು ಭೀಕರವಾಗಲಿರುವ ಸೂಚನೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಮೊದಲು ರೈಲ್ವೆ ಪ್ರಯಾಣ ದರ, ನಂತರ ಅಡುಗೆ ಅನಿಲದ‌ ಬೆಲೆ ಹೆಚ್ಚಿಸಲಾಗಿದೆ. ಇನ್ನೊಂದೆಡೆ ತೆರಿಗೆ ಸಂಗ್ರಹ ಕುಂಠಿತಗೊಳ್ಳುತ್ತಿದೆ ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೀತಿ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿರುವ ಸಿದ್ದರಾಮಯ್ಯ ಮತ್ತೊಮ್ಮೆ ನರೇಂದ್ರ ಮೋದಿ ಆಡಳಿತವನ್ನು ಟೀಕಿಸಿದ್ದಾರೆ.

ABOUT THE AUTHOR

...view details