ಬೆಂಗಳೂರು: ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಗೊಂದಲದ ಹೇಳಿಕೆಗಳನ್ನು ನೀಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದ ಆರೋಗ್ಯ ಇಲಾಖೆಯ ದಾಖಲೆ ಪ್ರಕಾರ 2020ರ ಡಿಸೆಂಬರ್ವರೆಗಿನ ಕೊರೊನಾ ಸಂಬಂಧಿತ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿ ಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಸಾವಿನ ಸಂಖ್ಯೆ- 22,320. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೇ ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಎಂದು ಕೇಳಿದ್ದಾರೆ.
ಕೊರೊನಾ ಉಲ್ಭಣಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳೇ ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ ಎಂದಿದ್ದಾರೆ.